
ಜನವರಿ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್ ಆಯಿಲ್ ಬ್ಯೂಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳ ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭವಾಗುತ್ತಿದೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ.
ವಿಶ್ವದ ಶೇ. 20 ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು ಈಗ ಇರಾನ್ ಬಳಿ ಇದೆ. ಈ ಕಿರು ಜಲಮಾರ್ಗದಲ್ಲಿ ಇರಾನ್ ಬಿಟ್ಟು ಬೇರೆ ದೇಶಗಳ ಹಡಗುಗಳು ಸಾಗುತ್ತಿಲ್ಲ. ಯುದ್ಧ ಶುರುವಾದಾಗಿನಿಂದ ತೈಲಕ್ಕೆ ಬಂದಿರುವ ಬೇಡಿಕೆಯು ಇರಾನ್ಗೆ ಒಳ್ಳೆಯ ಬ್ಯುಸಿನೆಸ್ ತಂದಿದೆ.
ಇದನ್ನೂ ಓದಿ: ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ಇರಾನ್ ಈಗ ದಿನಕ್ಕೆ 16 ಲಕ್ಷ ಬ್ಯಾರಲ್ ಕಚ್ಛಾ ತೈಲವನ್ನು ಮಾರುತ್ತಿದೆ. ಯುದ್ಧಕ್ಕೆ ಮುಂಚೆ ಇರಾನ್ಗೆ ವಿವಿಧ ನಿಷೇಧಗಳನ್ನು ಹಾಕಿರುವ ಅಮೆರಿಕವು ಈಗ ತೈಲ ಮಾರುವಂತೆ ಇರಾನ್ಗೆ ದುಂಬಾಲು ಬಿದ್ದಿದೆ. ಯುದ್ಧ ಮುಂದುವರಿಸಲು ಬೇಕಾದ ಫಂಡಿಂಗ್ ಅನ್ನು ಇರಾನ್ಗೆ ಸಿಗುತ್ತಿರಬಹುದು. ಇರಾನ್ ನಿಂದ ಅತಿಹೆಚ್ಚು ತೈಲ ಪಡೆಯುತ್ತಿರುವುದು ಚೀನಾ.
ರಷ್ಯಾ ತೈಲಕ್ಕೆ ಬಹಳ ಡಿಮ್ಯಾಂಡ್
ಇರಾನ್ ಯುದ್ಧ ಶುರುವಾದ ಬಳಿಕ ರಷ್ಯಾ ತೈಲಕ್ಕೆ ವಿಪರೀತ ಬೇಡಿಕೆ ಬಂದಿದೆ. ಎಲ್ಲಾ ದೇಶಗಳಿಗೆ ಅಮೆರಿಕವೇ ಹಸಿರು ನಿಶಾನೆ ತೋರಿದೆ. ವರದಿ ಪ್ರಕಾರ ರಷ್ಯಾಕ್ಕೆ ದಿನವೊಂದಕ್ಕೆ 760 ಮಿಲಿಯನ್ ಡಾಲರ್ ಆದಾಯವು ಸಿಗುತ್ತಿದೆ. ಅಂದರೆ, ತೈಲ ಮಾರಾಟದಿಂದ ರಷ್ಯಾ ದಿನಕ್ಕೆ 7,000 ಕೋಟಿ ರೂ ಹಣ ಗಳಿಸುತ್ತಿದೆ.
ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ
ಉಕ್ರೇನ್ ಯುದ್ಧ ಆರಂಭವಾದ ಬಳಿಕ ರಷ್ಯಾ ಮೇಲೆ ಅಮೆರಿಕ ನಿಷೇಧ ಹಾಕಿದ ಪರಿಣಾಮ ರಷ್ಯಾ ಕಡಿಮೆ ಬೆಲೆಗೆ ತೈಲ ಪೂರೈಕೆ ಮಾಡುತ್ತಿದೆ. ಚೀನಾ ಮತ್ತು ಭಾರತ ಮತ್ತು ಇತರ ಕೆಲವು ದೇಶಗಳು ಅಗ್ಗದ ಬೆಲೆಗೆ ಇನ್ನೂ ತೈಲ ಪಡೆಯುತ್ತಿದ್ದವು. ಈಗ ತೈಲಕ್ಕೆ ಬೇಡಿಕೆ ಹೆಚ್ಚಿಗೆ ಲಭ್ಯವಿರುವ ತೈಲ ಡಿಸ್ಕೌಂಟ್ ನಲ್ಲಿ ಸಿಗುತ್ತಿಲ್ಲ. ಹೆಚ್ಚುವರಿ ಬೆಲೆಗೆ ರಷ್ಯಾ ತನ್ನ ತೈಲವನ್ನು ಮಾರುತ್ತಿದೆ. ಭಾರತಕ್ಕೆ ಈ ಹಿಂದೆ ಸಿಗುತ್ತಿದ್ದ ಡಿಸ್ಕೌಂಟ್ ಈಗ ಇಲ್ಲ. ಚೀನಾಗೆ ನೀಡಿದ್ದ ಡಿಸ್ಕೌಂಟ್ ಅರ್ಧದಷ್ಟು ಕಡಿಮೆಯಾಗಿದೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ