ಚಿಕ್ಕಮಗಳೂರು, ಅಕ್ಟೋಬರ್ 20: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ದೇವಿರಮ್ಮ ಬೆಟ್ಟದ (ದೇವಿರಮ್ಮ ಬೆಟ್ಟ) ಮೇಲೆ ಮೂವರು ಭಕ್ತರು ಅಸ್ವಸ್ಥರಾದ ಘಟನೆ ನಡೆದಿದೆ. 6 ಸಾವಿರ ಅಡಿ ಎತ್ತರದ ಬೆಟ್ಟದ ಮೇಲೆ ಅಸ್ವಸ್ಥಗೊಂಡಿದ್ದ ಭಕ್ತರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೆಟ್ಟದಿಂದ ಕೆಳಗೆ ಸಾಗಿಸಿದ್ದಾರೆ. ವ್ಯಕ್ತಿಯ ವ್ಯಕ್ತಿಯ ಕಾಲು ಮುರಿತದಿಂದಾಗಿ, ಮತ್ತಿಬ್ಬರು ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ ಚಿಕ್ಕಮಗಳೂರು ನಗರದ ಆಸ್ಪತ್ರೆಗೆ ಅವರನ್ನು ರವಾನೆ ಮಾಡಲಾಗಿದೆ. ರಾತ್ರಿಯಿಡೀ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆ, ಭಾರಿ ಮಳೆ ನಡುವೆಯೂ ಬೆಟ್ಟ ಏರಿ ಭಕ್ತರು ಶಕ್ತಿದೇವತೆ ದರ್ಶನ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯವರೆಗೂ ಬೆಟ್ಟ ಏರುವುದಕ್ಕೆ ಅವಕಾಶವಿದೆ, 50 ಸಾವಿರಕ್ಕೂ ಅಧಿಕ ಭಕ್ತರು ನಿನ್ನೆ ಬೆಟ್ಟ ಏರಿ ದೇವಿಯ ದರ್ಶನ ಮಾಡಿದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.