
ಚಿಕ್ಕಮಗಳೂರು, ಮಾರ್ಚ್ 29: ಮೇಲೆ ಮೋಸ ಹೋಗುವವರು ಇರುವವರೆಗೆ ಮೋಸ (ವಂಚನೆ) ಮಾಡುವವರು ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್ಬುಕ್ ಜಾಹಿರಾತು ನಂಬಿ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಐಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬವರಿಗೆ ಖದೀಮರು ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಿನಲ್ಲಿ ಕೋಟ್ಯಂತರ ರೂ ಹಣ ವಂಚಿಸಿದ್ದಾರೆ. ‘FYERS’ ಎಂಬ ಟ್ರೇಡಿಂಗ್ ಜಾಹೀರಾತನ್ನು ಫೇಸ್ ಬುಕ್ ನಲ್ಲಿ ನೋಡಿದ ಕಲ್ಲೇಗೌಡರು F8-FYERS ಸೆಕ್ಯೂರಿಟೀಸ್ ವಾಟ್ಸಾಪ್ ಗ್ರೂಪ್ ಸೇರಿದ್ದಾರೆ.
ಇದನ್ನೂ ಓದಿ: ಫೇಸ್ಬುಕ್ ಮೂಲಕ ಕಾರು ಖರೀದಿಸುವ ಮುನ್ನ ಹುಷಾರ್: ಅಂತಾರಾಜ್ಯ ಜಾಲ ಪತ್ತೆ
ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕಲ್ಲೇಗೌಡಗೆ ವಂಚಕರು ಹೆಚ್ಚಿನ ಲಾಭ ಗಳಿಸುವ ಆಸೆ ತೋರಿಸಿದ್ದಾರೆ. ಹಂತವಾಗಿ 28 ಲಕ್ಷದ 10 ಸಾವಿರ ರೂ. ಆದರೆ ಯಾವುದೇ ರೀತಿಯ ಲಾಭಾಂಶ ನೀಡಿಲ್ಲ. ಹೀಗಾಗಿ ಕಲ್ಲೇಗೌಡರು ಹಣ ವಿತ್ತರ ಹೋದಾಗ ವಂಚನೆಗೊಳಗಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಕಲ್ಲೇಗೌಡರಿಂದ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎರಡೆರಡು ಮನೆಗಳಿಗೆ ಕನ್ನ ಹಾಕಿದ ಖದೀಮರು
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ತಡರಾತ್ರಿ ಎರಡು ಕಡೆ ಮನೆಗಳ್ಳತನ ನಡೆದಿದ್ದು, ಖದೀಮರು ಬೆಳ್ಳಿ, ಚಿನ್ನಾಭರಣ ಮತ್ತು ಹಣವನ್ನು ಕಳ್ಳತನ ಮಾಡಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಪ್ಪಗೆರೆ ಗ್ರಾಮದಲ್ಲಿ ವಕೀಲರಾದ ಪ್ರವೀಣ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, 240 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ಮತ್ತು 20 ಲಕ್ಷ ರೂ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿರಾತಕರಿಂದ ಕೃತ್ಯವೆಸಗಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ
ಸ್ಥಳದಲ್ಲಿ ರಾಮನಗರದ ಭುನೇಶ್ವರಿನಗರದಲ್ಲಿ ನಂಜುಂಡಯ್ಯ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ. 68 ಗ್ರಾಂ ಚಿನ್ನಾಭರಣ ದೋಚಿ ಪರಾರಿ ಆಗಿದ್ದಾರೆ. ನಂತರ ಮುಖಕ್ಕೆ ಮಾಸ್ಕ್, ಕೈಗೆ ಗ್ಲೋಸ್ ಹಾಕಿಕೊಂಡು ಬಂದು ಚನ್ನಪಟ್ಟಣದಲ್ಲಿ ಕಳ್ಳತನ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಹಾಗೂ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.