Headlines

ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ

ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ


ಒಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲು ಕಡ್ಡಿ ಕೂಡ ಆಸರೆ’ ಎಂಬಂತೆ ಅದೊಂದು ಗ್ಯಾಸ್ ಸಿಲಿಂಡರ್ ಒಟಿಪಿಯಿಂದ ವೃದ್ಧ ಜೀವವೊಂದು ದೊಡ್ಡ ಅಪಾಯದಿಂದ ಬದುಕಿದೆ. ಆಯತಪ್ಪಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಗ್ಯಾಸ್ ಸಿಲಿಂಡರ್ (ಗ್ಯಾಸ್ ಸಿಲಿಂಡರ್) ಒಟಿಪಿಯಿಂದ ರಕ್ಷಣೆ ಮಾಡಲಾಗಿದೆ. ಆ ಮೂಲಕ ಅಪರೂಪದ ಘಟನೆಗೆ ಉಡುಪಿ (ಉಡುಪಿ) ಜಿಲ್ಲೆ ಸಾಕ್ಷಿಯಾಗಿದೆ. ಸದ್ಯ ರಕ್ಷಣೆಯಲ್ಲಿರುವ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಡೆದಿದ್ದೇನು?

ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಿರ್ಜನ ಪ್ರದೇಶದ ಮನೆಯಲ್ಲಿ ಶೀನಿವಾಸ್ ಆಚಾರ್ಯ(62) ಎಂಬುವವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ಸುಧಾರಿಸಿಕೊಂಡ ಅವರು ತೋಟಕ್ಕೆ ನೀರು ಹಾಯಿಸಲು ಅದೊಂದು ದಿನ ತೆರಳಿದ್ದಾರೆ. ಬಾವಿಗೆ ಹಾಕಿದ್ದ ಪಂಪ್ನಲ್ಲಿ ಕಸ ತುಂಬಿದೆ. ಅದನ್ನು ಮಾಡಲು ಬಾವಿಗೆ ತೆರಳಿದ್ದಾರೆ. ಪೈಪ್ ಎಳೆಯಲು ಹೋಗಿ ಹಗ್ಗ ತುಂಡಾಗಿದೆ. ಈ ವೇಳೆ ಅವರು ಕೂಡ ಆಯತಪ್ಪಿ ಸುಮಾರು 15 ರಿಂದ 20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್

ಒಂಟಿ ಮನೆ ಹಾಗೂ ಏಕಾಂಗಿಯಾಗಿ ಶ್ರೀನಿವಾಸ್ ಆಚಾರ್ಯ ವಾಸಿಸುತ್ತಿದ್ದ ಹಿನ್ನೆಲೆ ಯಾರ ಗಮನಕ್ಕೂ ಬಂದಿರಲಿಲ್ಲ. ಬಾವಿ ಒಳಗಿಂದ ಎಷ್ಟು ಬೊಬ್ಬೆ ಹೊಡೆದರು ಯಾರ ಅರಿವಿಗೂ ಬಂದಿಲ್ಲ. ಇನ್ನೇನು ಮಾಡುವುದು ಎಂದು ಬಾವಿಯಲ್ಲಿದ್ದ ಪೈಪ್ ಅನ್ನು ಹಿಡಿದು ಕುಳಿತುಕೊಂಡಿದ್ದಾರೆ. ಶ್ರೀನಿವಾಸ್ ಆಚಾರ್ಯ ಅವರು ಹೇಳುವ ಪ್ರಕಾರ ಮೂರು ದಿನಗಳ ಕಾಲ ಬಾವಿಯಲ್ಲಿ ಇದ್ದೆ ಎನ್ನುತ್ತಿದ್ದಾರೆ.

ಜೀವ ಉಳಿಸಿತು ಗ್ಯಾಸ್ ಸಿಲಿಂಡರ್ ಒಟಿಪಿ

ಹೌದು. ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್ ಎಂದರೆ ನೀವು ನಂಬಲೇಬೇಕು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್. ಗ್ಯಾಸ್ ಬುಕ್ ಮಾಡಿ ಪರಿಚಯಸ್ಥರಾದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಆ ಮೂಲಕ ಹೊಸ ಸಿಲಿಂಡರ್ ಪಡೆಯುವ ನಿರೀಕ್ಷೆಯಲ್ಲಿದ್ದರು. ಈ ನಡುವೆ ಬಾವಿಗೆ ಬಿದ್ದಿದ್ದಾರೆ.

ಮೂರು ದಿನದ ಬಳಿಕ ಪತ್ತೆ

ಹೊಸ ಸಿಲಿಂಡರ್ಗಾಗಿ ಒಟಿಪಿ ಬೇಕಾಗಿತ್ತು. ಗ್ಯಾಸ್ ಸರಬರಾಜಿಗೆ ಬಂದಾಗ ಶ್ರೀನಿವಾಸ್ ಆಚಾರ್ಯ ಮನೆಯಿಂದ ನಾಪತ್ತೆಯಾಗಿದ್ದರು. ಸ್ಥಳೀಯರು ಸಿಲಿಂಡರ್ ನೀಡಿದ್ದ ಗಣೇಶ್ ಅವರಿಗೆ ಮಾಹಿತಿ ನೀಡಲಾಗಿದೆ. ಗಣೇಶ್ ತಮ್ಮ ಬಾಡಿಗೆ ಮನೆಯಲ್ಲಿ ಇರುವ ವ್ಯಕ್ತಿಗಳ ಮೂಲಕ ಶ್ರೀನಿವಾಸ್ ಗಾಗಿ ಹುಡುಕಾಡಿದ್ದಾರೆ. ಈ ವೇಳೆ ತೋಟದ ಮನೆಯ ಮೂಲೆಯಲ್ಲಿರುವ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಫಲಕೊಟ್ಟ ವಯಸ್ಕರ ಶಿಕ್ಷಣ ಅಭಿಯಾನ: ಉಡುಪಿ ಶೀಘ್ರವೇ ಪೂರ್ಣ ಸಾಕ್ಷರ ಜಿಲ್ಲೆ; ಘೋಷಣೆಯೊಂದೇ ಬಾಕಿ

ತಕ್ಷಣ ಕಾರ್ಯಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ, ಶ್ರೀನಿವಾಸ್ ಆಚಾರ್ಯರನ್ನು ಬಾವಿಯಿಂದ ಮೇಲಕ್ಕೆ ಎತ್ತುವ ಮೂಲಕ ರಕ್ಷಣೆ ಮಾಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *