ರಾಜ್ಯ ಸರ್ಕಾರಿ ನೌಕರರ ಪಿಂಚಣಿ ನಿಯಮಗಳಲ್ಲಿ ಹೊಸ ಬದಲಾವಣೆ : ಸರ್ಕಾರದಿಂದ ಹೊಸ ನಡೆ | New Change In Pension Rules For State Government Employee New Move From The Government Of Karnataka Mrq
ರಾಜ್ಯದ ಎನ್ಪಿಎಸ್ ನೌಕರರ ಪಿಂಚಣಿ ಸಮಸ್ಯೆಗಳ ಕುರಿತು ಪರಿಶೀಲಿಸಲು ರಚಿಸಲಾದ ಸಮಿತಿಗೆ ಅಂತಿಮ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಬೇಕಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆಂಧ್ರಪ್ರದೇಶ, ಹಿಮಾಚಲ ಪ್ರದೇಶದ ಮಾದರಿಗಳನ್ನು ಅಧ್ಯಯನ ಮಾಡಲಾಗುತ್ತಿದ್ದು, ಸಮಗ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಮಂಗಳೂರು: ಪಿಂಚಣಿ ಸಂಬಂಧಿತ ನಿಯಮಗಳಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಪಿಂಚಣಿ ನಿಯಮಗಳಲ್ಲಿ ಆಗುತ್ತಿರುವ ಈ ಹೊಸ ಬದಲಾವಣೆಗಳ ಪರಿಣಾಮಗಳನ್ನು ಅರ್ಥೈಸಿಕೊಳ್ಳಲು ಹಾಗೂ ಈ ಕುರಿತು ಸಮಗ್ರ ಪರಿಹಾರವನ್ನು ನೀಡಬೇಕಾಗಿರುವುದರಿಂದ ಸಮಿತಿಯು ಸರ್ಕಾರಕ್ಕೆ ಅಂತಿಮ…