
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 24ರ ದಿನಭವಿಷ್ಯ
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ವಿದೇಶದಲ್ಲಿ ವ್ಯಾಸಂಗ/ ಉದ್ಯೋಗ ಮಾಡಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಹೋಟೆಲ್ ಉದ್ಯಮವನ್ನು ನಡೆಸುತ್ತಿರುವವರಿಗೆ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಇನ್ನು ಇದಕ್ಕಾಗಿಯೇ ಬ್ಯಾಂಕ್ ಅಥವಾ ಬ್ಯಾಂಕೇತರ ಸಂಸ್ಥೆಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಂತಾದಲ್ಲಿ ಇಲ್ಲಿಯವರೆಗೆ ನಾನಾ ಕಾರಣಗಳಿಂದ ವಿಳಂಬ ಆಗುತ್ತಿರುವ ಪ್ರಕ್ರಿಯೆಗೆ ವೇಗ ದೊರೆಯಲಿದೆ. ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ…