
IND vs ENG: ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ರಿಷಭ್ ಪಂತ್
ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರಿಷಭ್ ಪಂತ್ 44 ಟೆಸ್ಟ್ ಪಂದ್ಯಗಳಲ್ಲಿ 150 ಕ್ಯಾಚ್‌ಗಳನ್ನು ಪೂರೈಸಿದ ಮೂರನೇ ಭಾರತೀಯ…