
ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. | Nikhil Kumaraswamy Reveals The Next Constituency
ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ನಾನು ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ…