ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಕಾಶ್ ರಾಜ್ ತಾಯಿ ಅಂತಿಮ ಸಂಸ್ಕಾರ, ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆದಿದ್ದೆಲ್ಲಿ?
<p>ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ಹೈದರಾಬಾದ್ನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತಂದು, ಚರ್ಚ್ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಆಡುಗೋಡಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.</p><img><p>ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಾರ್ಚ್ 30ರಂದು ಹೈದರಾಬಾದ್ನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದರು.</p><img><p>ಹೈದರಾಬಾದ್ನಲ್ಲಿ ನಿಧನರಾದ ತಾಯಿಯ ಪಾರ್ಥಿವ ಶರೀರವನ್ನು ಪ್ರಕಾಶ್ ರಾಜ್ ಅವರು ಮಾರ್ಚ್ 31ರಂದು ಬೆಳಿಗ್ಗೆ ವಿಶೇಷ ವ್ಯವಸ್ಥೆಯ ಮೂಲಕ ಬೆಂಗಳೂರಿಗೆ ತೆಗೆದುಕೊಂಡು…