ಸಿದ್ದರಾಮಯ್ಯ ಎದುರಲ್ಲೇ ‘ಜಾರಕಿಹೊಳಿ ಮುಂದಿನ ಸಿಎಂ’ ಕೂಗು! ವಾಲ್ಕೀಕಿ ಜಾತ್ರೆಯಲ್ಲಿ ನಡೆದಿದ್ದೇನು? | Next Cm Slogans At Valmiki Jatra Davanagere What Did Siddaramaiah And Jarkiholi Say
ಡಿಸಿಎಂ ಡಿಕೆ ಶಿವಕುಮಾರ್‌ಗೆ 80 ಶಾಸಕರ ಬೆಂಬಲವಿದೆ ಎಂಬ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಸಿಎಂ ಕುರ್ಚಿಯ ಗೊಂದಲ ಯಾವಾಗ ಬಗೆಹರಿಯುತ್ತದೆ ಎಂದು ತಾನೂ ಕಾಯುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ದಾವಣಗೆರೆ (ಫೆ.10): 80 ಶಾಸಕರ ಬೆಂಬಲ ಎಂಬುದು ಪ್ರಶ್ನೆಯಲ್ಲ. ಸಮರ್ಥರಿಗೆ, ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಇರುವವರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಆದರೆ, ಅಂತಹ ಸಂದರ್ಭ ಇನ್ನೂ ಬಂದಿಲ್ಲ. ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ…