ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ದ ಆಡಬೇಕು ಅಂದ್ರೆ…? ಐಸಿಸಿ ಮುಂದೆ 3 ಪ್ರಮುಖ ಡಿಮ್ಯಾಂಡ್ ಇಟ್ಟ ಪಾಕಿಸ್ತಾನ!
<p>ಕರಾಚಿ: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿ ಮುಂದೆ ಹಲವು ಷರತ್ತುಗಳನ್ನು ಇಟ್ಟಿದೆ. ಪಿಸಿಬಿ ಇಟ್ಟಿರುವ ಮೂರಕ್ಕೂ ಹೆಚ್ಚು ಬೇಡಿಕೆಗಳಲ್ಲಿ ಪ್ರಮುಖವಾದವುಗಳು ಇಲ್ಲಿವೆ.</p><p> </p><img><p>ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಬಾಂಗ್ಲಾದೇಶ ತಂಡವನ್ನು ಕಿಕೌಟ್ ಮಾಡಿದ್ದನ್ನು ವಿರೋಧಿಸಿ, ಪಾಕಿಸ್ತಾನ ತಂಡವು ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ಎದುರಿನ ಪಂದ್ಯವನ್ನು ಬಾಯ್ಕಾಟ್ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಹೀಗಾಗಿ ಭಾರತ-ಪಾಕ್ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯುತ್ತೋ ಅಥವಾ ಇಲ್ಲವೇ ಎನ್ನುವ…