ವಾಯುವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅನಿರೀಕ್ಷಿತ ತಿರುವು, KEA ಮಹತ್ವದ ಘೋಷಣೆ | Karnataka Nwkrtc Recruitment Exam Postponed To April 10 Due To By Elections Gdp
ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ, ಏಪ್ರಿಲ್ 9ರಂದು ನಡೆಯಬೇಕಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 10ಕ್ಕೆ ಮುಂದೂಡಿದೆ. ಒಟ್ಟು 33 ಹುದ್ದೆಗಳಿಗೆ ನಡೆಯುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರಿಷ್ಕೃತ ದಿನಾಂಕದಂದು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಾಧಿಕಾರ ಸೂಚಿಸಿದೆ. ಬೆಂಗಳೂರು: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಅದೇ ದಿನ ನಿಗದಿಯಾಗಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ…