ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು
ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರಗಳಿಗೆ ಹೆಸರಾದ ಹಾಸನದ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿವೆ. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ ಕಿಡಿಗೇಡಿಗಳು, “ದೇವಸ್ಥಾನದ…