Ishan Kishan: 12 ಬೌಂಡರಿ,1 ಸಿಕ್ಸ್; ಇಂಗ್ಲೆಂಡ್‌ನಲ್ಲಿ ಅಬ್ಬರಿಸಿದ ಇಶಾನ್ ಕಿಶನ್
ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ಬಹಳ ಸಮಯದಿಂದ ಟೀಂ ಇಂಡಿಯಾ ಪರ ಆಡಿಲ್ಲ. 2023 ರಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದ ಕಿಶನ್ಗೆ, ಭಾರತ ಎ ತಂಡದ ಇತ್ತೀಚಿನ ಇಂಗ್ಲೆಂಡ್ ಪ್ರವಾಸದಲ್ಲೂ ಆಡುವ 11 ರ ಬಳಗದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾಟಿಂಗ್‌ಹ್ಯಾಮ್‌ಶೈರ್ ತಂಡದ ಪರ ಆಡುತ್ತಿದ್ದು, ಎರಡು ಪಂದ್ಯಗಳನ್ನು ಆಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅದರಂತೆ ಯಾರ್ಕ್‌ಷೈರ್ ವಿರುದ್ಧ ಟ್ರೆಂಟ್…