ರೋಡ್ ಶೋ ವೇಳೆ ಅಭಿಮಾನಿ ತಲೆ ಮೇಲೆ ಹರಿದ ಜಗನ್ ಕಾರು, ಭಯಾನಕ ವಿಡಿಯೋ
ಗುಂಟೂರು, (ಜೂನ್ 22): ಆಂಧ್ರ ಪ್ರದೇಶದ (Andra Pradesh) ಗುಂಟೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ (YSR Congress) ಮುಖ್ಯಸ್ಥ ಜಗನ ಮೋಹನ್ ರೆಡ್ಡಿ (Jagan Mohan Reddy) ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಪಲ್ನಾಡು ಜಿಲ್ಲೆಗೆ ಭೇಟಿ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ…