IND vs ENG: ಸೆನಾ ದೇಶಗಳಲ್ಲಿ ಈ ಸಾಧನೆ ಮಾಡಿದ ಏಕೈಕ ಏಷ್ಯನ್ ಬೌಲರ್ ಜಸ್ಪ್ರೀತ್ ಬುಮ್ರಾ
ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ (Team India) 6 ರನ್‌ಗಳ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 471 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ, ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 465 ರನ್‌ಗಳಿಗೆ ಆಲೌಟ್ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಜಸ್ಪ್ರೀತ್ ಬುಮ್ರಾ (Jasprit Bumrah) ಒಟ್ಟು 5 ವಿಕೆಟ್‌ಗಳನ್ನು ಕಬಳಿಸಿ, ಆಂಗ್ಲರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಲ್ಲದೆ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆಯನ್ನು…