‘ಅನುಪಮಾ’ ಧಾರಾವಾಹಿ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ; ಭಯಾನಕ ವಿಡಿಯೋ ವೈರಲ್
ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ (Anupamaa Serial) ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ (Dadasaheb Phalke Chitranagari) ಈ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಸೋಮವಾರ (ಜೂನ್ 23) ಮುಂಜಾನೆ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಘಟನೆಯ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಭಾನುವಾರ (ಜೂನ್…