IND vs ENG: ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್
ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul), ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಲೀಡ್ಸ್‌ನ ಕಠಿಣ ಪಿಚ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ರಾಹುಲ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ರಾಹುಲ್ ಇಂಗ್ಲೆಂಡ್‌ನಲ್ಲಿ ಆರಂಭಿಕರಾಗಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಈ ಮೂಲಕ…