ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಂಚಲನ ಮೂಡಿಸಿದ ಕೈ ಶಾಸಕ
ರಾಮನಗರ, (ಜೂನ್ 22): ಕರ್ನಾಟಕದಲ್ಲಿ ಮತ್ತೆ ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡುವರೆ ವರ್ಷ ಕಾಲ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರನ್ನೆ ಮುಂದುವರಿಸಬೇಕೆಂದು ಇವರ ಬೆಂಬಲಿಗರು ಒತ್ತಾಸೆಯಾಗಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ. ರಾಮನಗರದಲ್ಲಿಂದು ಮಾತನಾಡಿರುವ ಇಕ್ಬಾಲ್ ಹುಸೇನ್ ,ಕಳೆದ ಬಾರಿ…