ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!
ಮಂಡ್ಯ, (ಜೂನ್ 23): ಸಕ್ಕರೆನಾಡು ಮಂಡ್ಯ ಜಿಲ್ಲೆಯ ರೈತರಿಗೆ (Mandya Farmers) ಈ ಬಾರಿ ಡಬಲ್ ಖುಷಿ. ಒಂದೆಡೆ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು (Krishna Raja Sagara Reservoir) ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗುತ್ತಿದೆ. 124.80 ಅಡಿ ಗರಿಷ್ಠ ಮಟ್ಟದ ಅಣೆಕಟ್ಟೆಯಲ್ಲೀಗ 120 ಅಡಿಗೂ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದೆ. KRS ಡ್ಯಾಂ ಭರ್ತಿಗೆ ಕೇವಲ ನಾಲ್ಕು ಅಡಿ ಬಾಕಿ ಇದ್ದು, ಎರಡ್ಮೂರು ದಿನಗಳಲ್ಲಿ ಅಣೆಕಟ್ಟು ಸಂಪೂರ್ಣ ತುಂಬಲಿದೆ. ಹೀಗಾಗಿ,ಇತಿಹಾಸದಲ್ಲೇ ಜೂನ್ ತಿಂಗಳಲ್ಲೇ ಕನ್ನಂಬಾಡಿ…