ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?
ಬೆಂಗಳೂರು, ಜೂನ್ 23: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ (High Court) ವಿಭಾಗೀಯ ಪೀಠ ಸೋಮವಾರ (ಜೂ.23) ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ನಡೆಸಿತು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ (ನ್ಯಾಯಾಲಯಕ್ಕೆ ನೆರವಾಗುವ ವಕೀಲ) ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ಪೀಠ ನೇಮಕ ಮಾಡಿತು. ಪಿಐಎಲ್ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾರಿಗೆ ನೀಡಲು ಪೀಠ ಸೂಚನೆ ನೀಡಿತು….