Video : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಪವಾಡ ಸದೃಶ ಪಾರಾದ ಮಹಿಳೆ
ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ (Gas Cylinder) ಇದ್ದೆ ಇರುತ್ತದೆ. ಈ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾದರೆ ಆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವುದು ಮುಖ್ಯ. ನಿರ್ಲಕ್ಷ್ಯ ವಹಿಸಿದರೆ ಅವಘಡ ಸಂಭವಿಸಿ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೇ ಹೆಚ್ಚು. ಇದೀಗ ಇಂತಹದ್ದೇ ಆಘಾತಕಾರಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ (social media) ಹರಿದಾಡುತ್ತಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಯಸ್ಸು ಗಟ್ಟಿ ಇತ್ತು ಕಾಣಿಸ್ತದೆ ಎಂದು…