IND vs ENG: ಶುಭ್ಮನ್ ಗಿಲ್, ರಿಷಭ್ ಪಂತ್ ವಿರುದ್ಧ ಐಸಿಸಿ ಕಠಿಣ ಕ್ರಮ ಸಾಧ್ಯತೆ
ಲೀಡ್ಸ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಹಾಗೂ ಉಪನಾಯಕ ರಿಷಭ್ ಪಂತ್ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೂರನೇ ದಿನದಾಟದ ವೇಳೆ ಚೆಂಡು ಬದಲಿಸಲು ಟೀಮ್ ಇಂಡಿಯಾ ಆಟಗಾರರು ಅಂಪೈರ್ಗೆ ಮನವಿ ಮಾಡಿದ್ದರು. ಮೊದಲಿಗೆ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ ಚೆಂಡು ತುಂಬಾ ಸವೆದಿದ್ದು, ಹೀಗಾಗಿ ಬದಲಿಸುವಂತೆ…