ತಬರನ ಕಥೆಯಂತಾಗಿದೆ ‘ಕೈ’ ಶಾಸಕರ ಸ್ಥಿತಿ: ಬಿಆರ್ ಪಾಟೀಲ್ ಹೇಳಿಕೆ ಉಲ್ಲೇಖಿಸಿ ಕೇಂದ್ರ ಸಚಿವ ಹೆಚ್‌ಡಿಕೆ ವಾಗ್ದಾಳಿ | Union Minister Hd Kumaraswamy Attacks Karnataka Congress Government Rav
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದ್ದು, ಅನುದಾನ ಮತ್ತು ಯೋಜನೆಗಳಿಗಾಗಿ ಅಲೆಯುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿ (ಜೂ.24): ರಾಜ್ಯ ಕಾಂಗ್ರೆಸ್ ಸರ್ಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರು ಅನುದಾನಕ್ಕಾಗಿ, ಸರ್ಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂತ ದುರ್ಗತಿ ಬಂದರೆ ಇತರೆ…