ಕ್ಯಾಚ್ ಕೈ ಚೆಲ್ಲಿಯೇ ಕಳಪೆ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 471 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಬೇಕಿತ್ತು. ಆದರೆ ಟೀಮ್ ಇಂಡಿಯಾ ಫೀಲ್ಡರ್ಗಳು ಮಾಡಿದ ತಪ್ಪುಗಳೇ ಭಾರತ ತಂಡದ ಪಾಲಿಗೆ ದುಬಾರಿಯಾಯಿತು. ಏಕೆಂದರೆ ಈ ಮ್ಯಾಚ್ನಲ್ಲಿ ಭಾರತೀಯ ಫೀಲ್ಡರ್ಗಳು ಚೆಲ್ಲಿರುವುದು ಬರೋಬ್ಬರಿ 5…