ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ; ಕತಾರ್, ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ
ನವದೆಹಲಿ, ಜೂನ್ 23: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಇಸ್ರೇಲ್ (Israel War) ಮತ್ತು ಇರಾನ್ ಮಧ್ಯೆ ಅಮೆರಿಕ ಎಂಟ್ರಿಯಾಗಿದೆ. ಇರಾನ್ (Iran) ಮೇಲೆ ಬಾಂಬ್ ದಾಳಿ ನಡೆಸಿದ್ದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಂಡಿರುವ ಇರಾನ್ ಅಮೆರಿಕದ ಸೇನಾ ಸಿಬ್ಬಂದಿಯನ್ನು ಹೊಂದಿರುವ ಕತಾರ್‌ನಲ್ಲಿರುವ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು 6 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ಅಮೆರಿಕದ ವಿರುದ್ಧ ಪ್ರತಿದಾಳಿ ಆರಂಭಿಸಿದ ಇರಾನ್ ಅಮೆರಿಕದ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್-ಇರಾಕ್‌ನಲ್ಲಿರುವ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ…