ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ
ಬೆಂಗಳೂರು, ಜೂನ್ 23: ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲೇಬೇಕು ಅನ್ನುವ ಕಾರಣಕ್ಕೆ ಖುದ್ದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಮುಲಾಜಿಲ್ಲದೆ ಚಾಲಕರ ವಿರುದ್ಧ ಕ್ರಮಕ್ಕೆ ಸೂಚನೆ…