ಪಾಟೀಲ್, ರಾಜು ಕಾಗೆ ಬೆನ್ನಲ್ಲೇ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ಚಿತ್ರದುರ್ಗ, (ಜೂನ್ 23): ವಸತಿ ಯೋಜನೆಯಲ್ಲಿ ಗೋಲ್ಮಾಲ್. ಹಣ ಕೊಟ್ಟವರಿಗಷ್ಟೇ ಮನೆ ಹಂಚಿಕೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಸಿಡಿಸಿದ ಆಡಿಯೋ ಬಾಂಬ್ ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿ, ರಾಜೀನಾಮೆ ನೀಡೋ ಬೆದರಿಕೆ ಹಾಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಮತ್ತೋರ್ವ ಕಾಂಗ್ರೆಸ್ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ತಮ್ಮ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ….