ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ…