ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್
<p><strong>ಬೆಂಗಳೂರು (ಜೂ.23):</strong> ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಕೆಲವೆಡೆ ಭಾನುವಾರವೂ ಮಳೆಯಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆ ಸುರಿದ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಶೃಂಗೇರಿ ಸುತ್ತಮುತ್ತ ಉತ್ತಮ ಮಳೆಯಾದ ಕಾರಣ ತುಂಗಾನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇಗುಲ ಮತ್ತೆ ಮುಳುಗಡೆಯಾಗಿದೆ. ಮಳೆ ಸುರಿಯುತ್ತಿರುವುದರಿಂದ ನೆಮ್ಮಾರು, ಸಾಲ್ಮರ, ತನಿಕೋಡು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.</p><p>ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು,…