IND vs ENG: 465 ರನ್ಗಳಿಗೆ ಇಂಗ್ಲೆಂಡ್ ಆಲೌಟ್; ಭಾರತಕ್ಕೆ ಒಂದಂಕಿ ಮೊತ್ತದ ಮುನ್ನಡೆ
ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮೊದಲ ಇನ್ನಿಂಗ್ಸ್ ಆಡಿ ಮುಗಿಸಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 471 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದರೆ, ಇತ್ತ ಆತಿಥೇಯ ಇಂಗ್ಲೆಂಡ್ 465 ರನ್ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನ್ನಿಂಗ್ಸ್ಗೆ ಅಂತ್ಯ ಹಾಡಿದೆ. ಈ ಮೂಲಕ ಭಾರತ ತಂಡಕ್ಕೆ ಮೊದಲ ಇನ್ನಿಂಗ್ಸ್ನಲ್ಲಿ 6 ರನ್ಗಳ ಮುನ್ನಡೆ ಸಿಕ್ಕಿದೆ. ವಾಸ್ತವವಾಗಿ ಇಂಗ್ಲೆಂಡ್…