ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್‌ಮ್ಯಾನ್, ಚಾಲಕನ ವಿರುದ್ಧ ಎಫ್ಐಆರ್
ದಾಬಸ್ಪೇಟೆ ಠಾಣೆಯಲ್ಲಿ ಅನಂತ್ ಕುಮಾರ್ ಹೆಗಡೆ ನೆಲಮಂಗಲ, ಜೂನ್ 24: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Anantkumar Hegde), ಅವರ ಕಾರು ಚಾಲಕ ಹಾಗೂ ಗನ್‌ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ. ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್‌ಮ್ಯಾನ್ ಶ್ರೀಧರ್, ಚಾಲಕ ಮಹೇಶ್…