ಉತ್ತರ ಪ್ರದೇಶ: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಹೊರಟಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು
ಉನ್ನಾವೋ, ಜೂನ್ 24: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಓಡೋಡಿ ಬರುತ್ತಿದ್ದಾಗ ರಸ್ತೆ ಅಪಘಾತ(Road Accident)ದಲ್ಲಿ ತಂದೆಯೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿಸಿ ಮಗ ಸಾವನ್ನಪ್ಪಿದ್ದ ಈ ಸುದ್ದಿ ಕೇಳಿ ತಂದೆ ಬೈಕಕ್ನಲ್ಲಿ ಮನೆಗೆ ಹೊರಟಿದ್ದರು, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿತ್ತು. ಹತ್ತಿರದ ಆಸ್ಪತ್ರೆಗೆ ಕೂಡಲೇ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೂರು ವರ್ಷದ ಆಯನ್ಶ್ ಜೈಸ್ವಾಲ್…