Bagalkote Bypolls: ನೆತ್ತಿ ಸುಡುವ ಬಿಸಿಲಿನ ಮಧ್ಯೆ ಕಾವೇರಿದ ಉಪಕದನ: ಕಾಂಗ್ರೆಸ್ನ ಮೇಟಿ, ಬಿಜೆಪಿಯ ಚರಂತಿಮಠ ಪರ ನಾಯಕರ ಭರ್ಜರಿ ಮತಬೇಟೆ | Bagalkot By Poll Heat Fierce Campaigning For Umesh Meti Vs Veeranna Charantimath Rav
ಬಾಗಲಕೋಟೆ ಉಪಚುನಾವಣೆ ಪ್ರಚಾರವು ಚುರುಕುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟು ಮತಯಾಚಿಸಿದರೆ, ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ಮತದಾರರ ಮನವೊಲಿಸುತ್ತಿದೆ. ಬಾಗಲಕೋಟೆ (ಮಾ.28): ನೆತ್ತಿ ಸುಡುವ ಬಿಸಿಲಿನ ಮಧ್ಯೆಯೇ ಬಾಗಲಕೋಟೆ ಉಪಕನದ ಪ್ರಚಾರ ಕಾರ್ಯ ಚುರುಕು ಪಡೆದುಕೊಂಡಿದ್ದು, ಶುಕ್ರವಾರ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು, ಮುಖಂಡರು ಭರ್ಜರಿ ಮತಬೇಟೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಸಚಿವ ಅಜಯಕುಮಾರ ಸರನಾಯಕ, ಜಿಲ್ಲಾ ಉಸ್ತುವಾರಿ…