
ಕಾಬೂಲ್, ಮಾ.17: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಬೂಲ್‌ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಸರ್ಕಾರ ಹೇಳಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಾಬೂಲ್‌ನಲ್ಲಿರುವ ‘ಓಮಿಡ್’ (ಓಮಿಡ್) ಹೆಸರಿನ 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದೆ. ಆಸ್ಪತ್ರೆಯ ಬಹುಪಾಲು ಕಟ್ಟಡಗಳು ಧ್ವಂಸವಾಗಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಾಲಿಬಾನ್ ವಕ್ತಾರ ಹಮ್ದುಲ್ಲಾ ಫಿತ್ರತ್ ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
ಮಾದಕ ವ್ಯಸನದ ಚಿಕಿತ್ಸೆಗಾಗಿ ಮೀಸಲಾಗಿರುವ 2,000 ಹಾಸಿಗೆಗಳ ಸೌಲಭ್ಯವಿರುವ ಓಮಿಡ್ ಅಡಿಕ್ಷನ್ ಟ್ರೀಟ್ಮೆಂಟ್ ಆಸ್ಪತ್ರೆಯ ಮೇಲೆ ಪಾಕಿಸ್ತಾನಿ ಮಿಲಿಟರಿ ಆಡಳಿತವು ಇಂದು ಸಂಜೆ ಸುಮಾರು 9:00 PM ಕ್ಕೆ ವೈಮಾನಿಕ ದಾಳಿ ನಡೆಸಿತು. ದಾಳಿಯ ಪರಿಣಾಮವಾಗಿ, ಆಸ್ಪತ್ರೆಯ ದೊಡ್ಡ ವಿಭಾಗಗಳು ನಾಶವಾಗಿವೆ,…
— ಹಮ್ದುಲ್ಲಾ ಫಿತ್ರತ್ಹಮದ್ಅಲಲಹ فطرت (@FitratHamd) ಮಾರ್ಚ್ 16, 2026
ಆದರೆ ಪಾಕಿಸ್ತಾನ ಈ ಆರೋಪವನ್ನು ತಿರಸ್ಕರಿಸಿದೆ. ತಾವು ಕೇವಲ ‘ಭಯೋತ್ಪಾದಕರು ಅಡಗುತಾಣಗಳು ಮತ್ತು ಮಿಲಿಟರಿ ನೆಲೆಗಳನ್ನು’ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ನಾಗರಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನ ಸಮರ್ಥಿಸಿಕೊಂಡಿದೆ.
ಇದನ್ನೂ ಓದಿ: ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್‌ನಿಂದ 550 ಭಾರತೀಯರ ಸ್ಥಳಾಂತರ
ಕಳೆದ ಒಂದು ತಿಂಗಳಿನಿಂದ ಉಭಯ ದೇಶಗಳ ನಡುವೆ ಗಡಿ ಸಂಘರ್ಷ ತೀವ್ರಗೊಂಡಿದೆ. ಅಫ್ಘಾನಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸುತ್ತಿದೆ, ಅಫ್ಘಾನಿಸ್ತಾನವು ಪಾಕಿಸ್ತಾನದ ದಾಳಿಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಕರೆದಿದೆ.
ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ