ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ


ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿ (ಪಿಎಂ ಮೋದಿ) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (ನಿತೀಶ್ ಕುಮಾರ್) ವಿವಾದಕ್ಕೆ ಸಿಲುಕಿದ್ದಾರೆ. ಕಾರ್ಯಕ್ರಮದಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರಿದ್ದರು. ಈ ಘಟನೆಗೆ ವಿಪಕ್ಷವಾದ ಆರ್ ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ, ಸ್ಪಷ್ಟನೆಯನ್ನೂ ನೀಡಿಲ್ಲ.

ಇದೀಗ ಈ ಹಿಜಾಬ್ ವಿವಾದ ಪಾಕಿಸ್ತಾನದ ಅಂಗಗಳನ್ನೂ ತಲುಪಿದೆ. ಮಹಿಳೆಯ ಹಿಜಾಬ್ ಎಳೆದ ಘಟನೆ ನಡೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನ ಮೂಲದ ಗ್ಯಾಂಗ್ ಸ್ಟರ್ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ವಿಡಿಯೋ: ಇದೇನ್ ಮಾಡಿದ್ರಿ? ವೇದಿಕೆಯಲ್ಲಿ ವೈದ್ಯರ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಸರ್ಕಾರಿ ಸಮಾರಂಭದಲ್ಲಿ ಸಿಎಂ ನಿತೀಶ್ ಕುಮಾರ್ ಮುಸ್ಲಿಂ ಮಹಿಳೆ ಹಿಜಾಬ್ ಅನ್ನು ಕಿತ್ತುಹಾಕುತ್ತಿರುವ ವಿಡಿಯೋ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ನಿತೀಶ್ ಕುಮಾರ್ ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರ ನೇಮಕಾತಿ ಪತ್ರವನ್ನು ನೀಡುವಾಗ ಅವರ ಮುಖದಿಂದ ‘ಹಿಜಾಬ್’ ಅನ್ನು ಎಳೆದಿದ್ದರು.

ಈ ಘಟನೆಗೆ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನದಿಂದ ಬೆದರಿಕೆ ಬಂದಿದೆ. ಹೀಗಾಗಿ, ಪಾಟ್ನಾ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ನಿತೀಶ್ ಕುಮಾರ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್ ಶಹಜಾದ್ ಭಟ್ಟಿ ಎಂಬುವವರು ಇನ್‌ಸ್ಟಾಗ್ರಾಮ್‌ನಲ್ಲಿ ಬಿಹಾರದ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ: ಹತ್ತನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ, ಪ್ರಧಾನಿ ಮೋದಿ ಭಾಗ

ಹಿಜಾಬ್‌ಗೆ ಕೈಹಾಕಿದ ನೀವು ಅದಕ್ಕೆ ಸೂಕ್ತವಾದ ಬೆಲೆಯನ್ನು ತರಲಾಗುತ್ತದೆ. ಮೊದಲೇ ಎಚ್ಚರಿಕೆ ನೀಡಲಿಲ್ಲ ಎನ್ನಬೇಡಿ. ಅದಕ್ಕಾಗಿಯೇ ಹೇಳುತ್ತಿದ್ದೇನೆ. ಹಿಜಾಬ್ ಎಳೆದ ಆ ವ್ಯಕ್ತಿಗೆ ಆ ಮುಸ್ಲಿಂ ಯುವತಿಯ ಬಳಿ ಕ್ಷಮೆ ಯಾಚಿಸಲು ಇನ್ನೂ ಸಮಯವಿದೆ. ಮುಂದೆ ಏನಾದರೂ ತೊಂದರೆಯಾದರೆ ಎಚ್ಚರಿಕೆ ನೀಡಲಿಲ್ಲ ಎಂದು ಆ ವ್ಯಕ್ತಿ ವಿಡಿಯೋದಲ್ಲಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *