
ಬಾಗಲಕೋಟೆ, ಏಪ್ರಿಲ್ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ ಕರಪತ್ರಗಳನ್ನು ಹಂಚುತ್ತಿದ್ದಾಗ, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆಯ ಸಿಪಿಐ ಕಚೇರಿ ಬಿಜೆಪಿ ಎದುರು ಕಾರ್ಯಕರ್ತರು ಜಮಾವಣೆಗೊಂಡಿದ್ದು, ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಈ ಘಟನೆಯಿಂದಾಗಿ ಕಚೇರಿ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿ.ವಿ. ಕಾಲೇಜು ಹಾಸ್ಟೆಲ್‌ಗೆ ತೆರಳಿ ಕರಪತ್ರ ಹಂಚಲಾಗಿದೆ. ಕರಪತ್ರಗಳಲ್ಲಿ ಬಿಜೆಪಿಗೆ ಮತ ಹಾಕಿದರೆ ಜೈಲಿಗೆ ಹೋಗುತ್ತೀರಿ, ಬಿಜೆಪಿ ನಿಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬರೆದಿರುವ ಬಗ್ಗೆ ಆರೋಪ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.