Headlines

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!


'ಸ್ಮಶಾನಕ್ಕೆ ಕಳುಹಿಸುತ್ತೇವೆ': ಮೊಬೈಲ್ ವಶಕ್ಕೆ ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (ಪರಪ್ಪನ ಅಗ್ರಹಾರ) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್‌ಗಳ ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿದೆ. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿದ್ದಾರೆ.

ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ ಅಸಮಾಧಾನ

ಕಳೆದ ಹತ್ತು ದಿನಗಳಲ್ಲಿ ಜೈಲು ಅಧಿಕಾರಿಗಳು 21 ಮೊಬೈಲ್ ಫೋನ್ ವಶಪಡಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ, ಫೋನ್‌ಗಳನ್ನು ಹಾಲಿನ ಕವರ್‌ಗಳಲ್ಲಿ ಮೊಬೈಲ್‌ಗಳನ್ನು ಪ್ಯಾಕ್ ಮಾಡಿ ಕೊಳಚೆ ನೀರು ಹರಿಯುವ ಪೈಪ್‌ಗಳಲ್ಲಿ ಮರೆಮಾಚಿ ಇಟ್ಟಿರುವುದು. ಜೈಲಿನೊಳಗೆ ಜಾಮರ್ ವ್ಯವಸ್ಥೆ ಇದ್ದರೂ ನೆಟ್ ವರ್ಕ್ ಸಿಗುತ್ತಿರುವುದರ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಜೈಲರ್‌ಗಳು ಹಾಗೂ ವಾರ್ಡರ್‌ಗಳ ಶಾಮೀಲು ಇರುವ ಶಂಕೆಯಾಗಿದ್ದು, ಎಲ್ಲರ ಮೇಲೂ ವಿಚಾರಣೆ ನಡೆಸಲು ಸೂಚಿಸಲಾಗಿದೆ. ಎಸ್‌ಪಿ ಅಂಶುಕುಮಾರ್ ನೇತೃತ್ವದಲ್ಲಿ ಕೆಲ ಅನುಮಾನಿತ ವಾರ್ಡರ್‌ಗಳನ್ನು ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈಗಳು!

ಬೆದರಿಕೆ ಹಾಕಿದವರ ವಿರುದ್ಧ ಕೇಸ್

ಮೊಬೈಲ್ ವಶಕ್ಕೆ ಮುಂದಾದ ಜೈಲು ಸಿಬ್ಬಂದಿಗೆ ಕೆಲವು ಕೈಗಳು ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರಿಜ್ವಾನ್ ಅಲಿ ಮತ್ತು ಮೊಹಮ್ಮದ್ ಸಾಧಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮನೆಗೆ ಹೋಗುವುದಿಲ್ಲ, ಸ್ಮಶಾನಕ್ಕೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 



Source link

Leave a Reply

Your email address will not be published. Required fields are marked *