ಕಾರಾಗೃಹದಲ್ಲಿ ಡ್ಯಾನ್ಸ್ ವಿಡಿಯೋ ವೈರಲ್ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು, ನವೆಂಬರ್ 12: ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ (ಪರಪ್ಪನ ಅಗ್ರಹಾರ) ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಎಲ್ಲಾ ಪ್ರಕರಣಗಳ ಕುರಿತು ಎಚ್ಚೆತ್ತ ಗೃಹ ಇಲಾಖೆ ಆಂತರಿಕ ತನಿಖೆಗೆ ಮುಂದಾಗಿದೆ. ಬಂಧಿತರ ವೈರಲ್ ಆದ ಡ್ಯಾನ್ಸ್ ವಿಡಿಯೋಗೆ ಸಂಬಂಧ ಪಟ್ಟಂತೆಯೂ ಎಫ್ಐಆರ್ ದಾಖಲಾಗಿದೆ.
ರಾಜಾತಿಥ್ಯ ಸಿಕ್ಕ ಕೈದಿಗಳ ವಿಚಾರಣೆ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಘಟನೆಯ ಆಂತರಿಕ ತನಿಖೆ ಪ್ರಾರಂಭವಾಗಿದೆ. ಮೊಬೈಲ್ ಫೋನ್ ಬಳಸಿದ್ದ ಆರೋಪದ ಕೈದಿಗಳಾದ ತರುಣ್ ಕೊಂಡೂರು, ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ ಹಾಗೂ ಜುಹಾದ್ ಹಮೀದ್ ಶಕೀಲ್ರನ್ನು ಜೈಲು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳು ಮೊಬೈಲ್ ಬಳಕೆ ಹಾಗೂ ಜೈಲಿನೊಳಗಿನ ಬಿಂದಾಸ್ ಜೀವನಶೈಲಿ ಬಗ್ಗೆ ಬಾಯ್ಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಆಂತರಿಕ ತನಿಖೆ ಮುಂದುವರಿಸಲಾಗುವುದು, ವರದಿ ಶೀಘ್ರದಲ್ಲೇ ಮೇಲಧಿಕಾರಿಗಳಿಗೆ ಸಲ್ಲಿಕೆಯಾಗಲಿದೆ.
ಡ್ಯಾನ್ಸ್ ವಿಡಿಯೋಗೆ ಸಂಬಂಧಿಸಿ ಎಫ್ಐಆರ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್ ಕುರಿತ ವಿಡಿಯೋಗಳು ವೈರಲ್ ಆಗುತ್ತಲೇ ಇವೆ. ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ನಡುವೆ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್: ಹಳೇ ವಿಡಿಯೋವೆಂದ ಜೈಲಾಧಿಕಾರಿಗಳು! ಹೊಸದೆನ್ನಲು ಇಲ್ಲಿವೆ ಸಾಕ್ಷ್ಯ
ಕಾರಾಗೃಹದಲ್ಲಿ ಬಂಧಿತರ ಡ್ಯಾನ್ಸ್ ವಿಡಿಯೋ ವೈರಲ್ ನಾಲ್ವರು ವಿಚಾರಣಾಧೀನ ಬಂಧಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾರ್ತಿಕ್, ಧನಂಜಯ, ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಮತ್ತು ಚರಣ್ ರಾವ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಯಾರಕ್ 8ರ ಕೊಠಡಿ ಸಂಖ್ಯೆ 7ರಲ್ಲಿ ನಡೆದ ಡ್ಯಾನ್ಸ್ನಲ್ಲಿ ನಿಷೇಧಿತ ವಸ್ತುಗಳ ಬಳಕೆಯ ಆರೋಪ ಕೇಳಿ ಬಂದಿತ್ತು. ಈ ಘಟನೆ 2018 ರಿಂದ 2025 ರ ಅವಧಿಯಲ್ಲಿ ನಡೆದಿದ್ದು, ಮೊಬೈಲ್ನಲ್ಲಿ ದೃಶ್ಯ ಸೆರೆಹಿಡಿದವರು ಹಾಗೂ ಫೋಟೋಗಳನ್ನು ಹಂಚಿದವರ ಕುರಿತು ತನಿಖೆ ಆರಂಭಿಸಲಾಗಿದೆ. ಬಿಎನ್ಎಸ್ ಸೆಕ್ಷನ್ 42 ಮತ್ತು ಕಾರಾಗೃಹ ಕಾಯ್ದೆ 2022ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್ ವಿಡಿಯೋ ವೈರಲ್ : ಯಾವ ಜೈಲಿನದ್ದು?
ದರ್ಶನ್ ರಾಜಾತಿಥ್ಯ ಪ್ರಕರಣ
ಜೈಲಿನಲ್ಲಿ ದರ್ಶನ್ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಕಳೆದರೂ ಚಾರ್ಜ್ ಶೀಟ್ ದಾಖಲಾಗಿದ್ದು ತನಿಖೆಯಲ್ಲೇ ಸಿಲುಕಿಕೊಂಡಿದೆ. 2024 ರ ಸೆಪ್ಟೆಂಬರ್ನಲ್ಲಿ ದಾಖಲಾಗಿದ್ದ ಮೂರು ಪ್ರಕರಣಗಳಲ್ಲಿ ನಟ ದರ್ಶನ್ , ಕೆಲವು ರೌಡಿಗಳು ಮತ್ತು ಜೈಲು ಅಧಿಕಾರಿಗಳು ಆರೋಪಿಗಳಾಗಿದ್ದರು. ಮೊದಲ ಕೇಸ್ನಲ್ಲಿ ದರ್ಶನ್ಗೆ ಸಿಕ್ಕಿದ್ದು, ಎರಡನೇ ಕೇಸ್ನಲ್ಲಿ ದರ್ಶನ್ ಮೊಬೈಲ್ ಬಳಸಿದ್ದು ಹಾಗೂ ಮೂರನೇಯದಾಗಿ ಮಧ್ಯರಾತ್ರಿ ವಸ್ತು ಸಾಗಾಟ ಎಂಬ ಆರೋಪದ ಕುರಿತು ಪಿಸಿ ಆಕ್ಟ್ ಅಧಿಕಾರಿಗಳ ವಿರುದ್ಧ ತನಿಖೆ ನಡೆದರೂ, ವರ್ಷ ಕಳೆದರೂ ಕೋರ್ಟ್ಗೆ ಚಾರ್ಜ್ಶೀಟ್ಗಳು ಸಲ್ಲಿಕೆಯಾಗಿಲ್ಲ. ದರ್ಶನ್ ಪ್ರಕರಣದ ಬಳಿಕವೂ ಜೈಲಿನಲ್ಲಿ 30ಕ್ಕೂ ಹೆಚ್ಚು ಮೊಬೈಲ್, ಮಾದಕ ವಸ್ತು ಹಾಗೂ ಶಸ್ತ್ರ ಪತ್ತೆ ಪ್ರಕರಣ ದಾಖಲಾಗಿದ್ದು, 27 ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.