
ಬೆಂಗಳೂರು, ಮಾರ್ಚ್ 12: ಹಲವು ತಿಂಗಳಿನಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (ಪರಪ್ಪನ ಅಗ್ರಹಾರ)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ.
ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ
ಮಾರ್ಚ್ 9 ರಂದು ರಾತ್ರಿ 8.15 ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವರನ್ನು ತಪಾಸಣೆಗೆ ಒಳಪಡಿಸಿದರು. ಈ ವೇಳೆ ಅವನ ಒಳಉಡುಪಿನಲ್ಲಿ ಹಣ ಮತ್ತು ಕಪ್ಪು ಟೇಪ್‌ನಿಂದ ಸುತ್ತಿದ ಒಂದು ಪೊಟ್ಟಣ ಪತ್ತೆಯಾಯಿತು. ಅನುಮಾನಗೊಂಡ ಸಿಬ್ಬಂದಿ ಅದನ್ನು ಪರಿಶೀಲಿಸಿದಾಗ ಅದರೊಳಗೆ ಗಾಂಜಾ ಇರುವುದನ್ನು ಕಂಡುಬಂದಿದೆ.
ಪ್ರಕಾಶ್ ಗಾವಡೆ ಕೆಎಸ್‌ಐಎಸ್‌ಎಫ್ ಸಿಬ್ಬಂದಿಯ ಕಣ್ಣು ತಪ್ಪಿಸಿ ಗಾಂಜಾ ಜೈಲಿನೊಳಗೆ ಸಾಗಿಸಲು ಯತ್ನಿಸುತ್ತಿದ್ದಾಗ ಪ್ರಾಥಮಿಕ ತನಿಖೆಯಲ್ಲಿ ಸೂಚಿಸಲಾಗಿದೆ. ಬಳಿಕ ಆತನನ್ನು ವಶಕ್ಕೆ ಪಡೆದ ಜೈಲು ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ. ವೇಳೆ ಜೈಲಿನಲ್ಲಿರುವ ಕೊಲೆ ಪ್ರಕರಣದ ಆರೋಪಿಯೊಬ್ಬ ಪ್ರಕಾಶ್‌ಗೆ ಕರೆ ಮಾಡಿ ಗಾಂಜಾ ತಂದುಕೊಡಲು ಸೂಚಿಸಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. ಹೊರಗಿನಿಂದ ಗಾಂಜಾ ತಂದು ಜೈಲಿನೊಳಗೆ ತಲುಪಿಸಿದರೆ ಹತ್ತು ಸಾವಿರ ರೂಪಾಯಿ ನೀಡುವುದಾಗಿ ಆರೋಪಿ ಹೇಳಿದ್ದಾನೆ.ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ ಮೊದಲ ಭೇಟಿಯಲ್ಲೇ ಪರಪ್ಪನ ಅಗ್ರಹಾರದಲ್ಲಿ ಎಲ್ಲರ ಬೆವರಿಳಿಸಿದ ನೂತನ ಡಿಜಿಪಿ ಅಲೋಕ್ ಕುಮಾರ್
ಈ ಹಿಂದೆಯೂ ವಾರ್ನ್ ಮಾಡಿದ್ರು ಡಿಜಿಪಿ
ಕಳೆದ ಡಿಸೆಂಬರ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಿಂಚಿನ ಸಂಚಾರ ನಡೆಸಿದ್ದ ಡಿಜಿಪಿ, ಅಡುಗೆ ಮನೆ, ಆಸ್ಪತ್ರೆಗೂ ಭೇಟಿ ನೀಡಿದ್ದರು. ವೈದ್ಯರು ಚಿಕಿತ್ಸೆ ಮಾತ್ರ ಕೊಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳುತ್ತೆ ಎಂದು ನೇರವಾಗಿ ಹೇಳಿದ್ದರು. ಅಡುಗೆ ಮನೆಯ ಸಿಬ್ಬಂದಿಗಳು ಎಚ್ಚರಿಸಿದ್ದ ಅವರು, ಎಡಿಷನಲ್ ಆಯಕ್ಟಿವಿಟಿಗಳು ಬಂದ್ ಆಗಬೇಕು ಎಂದಿದ್ದರು. ಜೈಲಿನ ಬೇಕು ಯಾರಿಗೂ ಡಿಜಿಪಿ ಭೇಟಿ ನೀಡಿದ್ದು, ಯೀಸ್ಟ್ನಿಂದ ವೈನ್ ತಯಾರಿಸಿದ್ರೆ ವೈಲೆಂಟ್ ಆಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಅವರ ನಡುವೆ ಮತ್ತೊಮ್ಮೆ ಇಂತಹ ಅಕ್ರಮಗಳು ಜೈಲಿನಲ್ಲಿ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.