ತುಮಕೂರು, ಜನವರಿ 03: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ (ಬಳ್ಳಾರಿ ಹಿಂಸಾಚಾರ ಪ್ರಕರಣ) ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದೆ ಅಂತಾ ಬಳ್ಳಾರಿಗೆ ಎಸ್ಪಿ ಪವನ್ ನೆಜ್ಜೂರ್ ನೇಮಕ ಮಾಡಿದ್ದಾರೆ (ಎಸ್ಪಿ ಪವನ್ ನೆಜ್ಜೂರು) ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗ್ತಿದೆ. ಸದ್ಯ ಈ ಬಗ್ಗೆ ಖುದ್ದು ಎಸ್ಪಿ ಪವನ್ ನೆಜ್ಜೂರ್ ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ.
ಪವನ್ ನೆಜ್ಜೂರ್ ತಂದೆಯಿಂದ ಫೇಸ್ ಬುಕ್ ಪೋಸ್ಟ್
ಬಳ್ಳಾರಿ ಗಲಾಟೆ ಹಿನ್ನಲೆ ಎಸ್ಪಿ ಅಮಾನತ್ತು ಹಿನ್ನಲೆ ಪವನ್ ನೆಜ್ಜೂರ್ ಅವರ ತಂದೆ ಉದಯ್ ಶಂಕರ್ ನೆಜ್ಜೂರ್ ಈ ಬಗ್ಗೆ ಫೇಸ್ ಬುಕ್ ನಲ್ಲಿ ಸುದೀರ್ಘ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ನನ್ನ ಮಗ 2016ನೇ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. ಅವರ ತಂದೆಯಾಗಿ ಕೆಲವು ವಿಷಯಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.
ಇದನ್ನೂ ಓದಿ: ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!
ಐಪಿಎಸ್ ಅಧಿಕಾರಿಯಾಗಿರುವ ನನ್ನ ಪುತ್ರ ಪವನ್ ನೇಜ್ಜೂರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಹಾಗೂ ಕಾನೂನು ಪಾಲನೆಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದೇನೆ ಎಂಬ ಹೆಮ್ಮೆ ನಮಗಿದೆ. ಆದರೆ ಬಳ್ಳಾರಿಯಲ್ಲಿ ನಡೆದ ಗಲಭೆಯ ಘಟನೆ ನಂತರ ನನ್ನ ಪುತ್ರನ ಬಗ್ಗೆ ಸುಳ್ಳು ವದಂತಿಗಳು ಹರಡುತ್ತಿರುವುದು ಬೇಸರ ಮೂಡಿಸಿದೆ.
ಉದಯ್ ಶಂಕರ್ ನೆಜ್ಜೂರ್ ಫೇಸ್ ಬುಕ್ ಪೋಸ್ಟ್
ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಗಲಭೆ ಪ್ರಕರಣದ ಸಂದರ್ಭದಲ್ಲಿ ನನ್ನ ಪುತ್ರ ಪವನ್ ನೆಜ್ಜೂರು ತಮ್ಮ ಜವಾಬ್ದಾರಿಯನ್ನು ಮರೆತಿಲ್ಲ ಎಂಬುವುದನ್ನು ಸ್ಪಷ್ಪಪಡಿಸುತ್ತಾರೆ. ಜನವರಿ 1 ರಂದು ಅಧಿಕಾರ ಸ್ವೀಕರಿಸಿ, ಸಂಪ್ರದಾಯದಂತೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಸುಮಾರು ಒಂದು ದಶಕ ಕಾಲ ಸೇವೆ ಸಲ್ಲಿಸಿದ ಲೋಕಾಯುಕ್ತ ಪೋಲೀಸರಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸ್ವೀಕರಿಸಿ, ನಂತರ ನಡೆದ ಈ ಅಹಿತಕರ ಘಟನೆಯ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಎದುರಿಸಿದ್ದು, ಎಲ್ಲರಿಗೂ ತಿಳಿದಿದೆ. ಶಿಸ್ತಿನ ಸಿಪಾಯಿ, ದಕ್ಷ ಅಧಿಕಾರಿ ಆಗಿರುವ ನನ್ನ ಮಗ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಗಲಭೆಯ ಘಟನೆ ಅನಿರೀಕ್ಷಿತ. ಆದಾಗ್ಯೂ ಕಾನೂನು ಸುವ್ಯವಸ್ಥೆಯ ಪಾಲನೆಗೆ ಸಂಪೂರ್ಣವಾಗಿ ಶ್ರಮಿಸಿ ಬೆಳಗಿನ ಜಾವವೂ ಮೃತರ ಅಂತ್ಯಕ್ರಿಯೆ ಸಂದರ್ಭ ಬಂದೋಬಸ್ತ್ ಮಾಡಿಯೂ ಅಮಾನತಿಗೆ ಒಳಪಟ್ಟಿದ್ದು, ಆತನಿಗೆ ಸಹಜವಾಗಿ ಬೇಸರ ಮೂಡಿಸಿ ಕೆಲಸಕ್ಕೆ ಸೇರಿದ್ದು, ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ.
ಇದನ್ನೂ ಓದಿ: ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್ ಐಆರ್
ಈ ವಿಷಯವಾಗಿ ಕಪೋಲಕಲ್ಪಿತ ವಿಷಯಗಳ ಚರ್ಚೆ ಆಗುತ್ತಿರುವುದು ನಮಗೆ ಬೇಸರ ಹಾಗೂ ಮಗನ ಮರ್ಯಾದೆ, ಭವಿಷ್ಯದ ಬಗ್ಗೆ ಅತ್ಯಂತ ಆತಂಕ ಮೂಡಿಸಿದೆ. ಒಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ನನ್ನ ಪುತ್ರ ಪವನ್ ನೆಜ್ಜೂರ್ ಆಸ್ಪತ್ರೆಗೆ ಬಂದಿದ್ದಾನೆ. ಅಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಅದೂ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ, ದಕ್ಷತೆಯಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಾಗಲೂ ಅನುಭವಿಸಬೇಕಾದ ಶಿಕ್ಷೆ ಆತನನ್ನು ಚಿಂತೆಗೀಡು ಮಾಡಿದೆ ಎಂದು ಹೇಳಿದರು.
ಅದೇನಿದ್ದರೂ ನನ್ನ ಪುತ್ರ ಐಪಿಎಸ್ ಒಬ್ಬ ಅಧಿಕಾರಿ ಪವನ್ ನೆಜ್ಜೂರ್ ಸರ್ಕಾರಿ ಅಧಿಕಾರಿಯಾಗಿ ಸರ್ಕಾರದ ಆದೇಶವನ್ನು ಶಿರಸಾ ಪಾಲಿಸಿದ್ದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ನನ್ನ ಬಗ್ಗೆ ಅನಗತ್ಯ ಹಾಗೂ ಸುಳ್ಳು ವದಂತಿಗಳನ್ನು ಹರಡದಂತೆ ಮತ್ತು ಅನಾರೋಗ್ಯಕ್ಕೆ ಒಳಗಾಗಿರುವ ಪವನ್ ನೆಜ್ಜೂರು ಅವರಿಗೆ ಕೊಂಚ ವಿಶ್ರಾಂತಿ ನೀಡುವುದು ಎಂದು ತಮ್ಮೆಲ್ಲರ ಗಮನಕ್ಕೆ ತರಬಯಸುತ್ತಾ, ಶಾಲೆಯ ಅಧಿಕಾರಿಯ ತಂದೆಯಾಗಿ ನಿಮ್ಮೆಲ್ಲರಿಗೂ ಮನವಿ ಮಾಡುವಂತೆ ನನ್ನ ಪುತ್ರನ ಅಮಾನತು ಕುರಿತು ಸರ್ಕಾರ ಮರುಪರಿಶೀಲನೆ ನಡೆಸುವಂತೆ ಕೋರಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.