
ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (ಪವನ್ ಕಲ್ಯಾಣ್), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದೆ, ಸಿನಿಮಾದ ಟೀಸರ್ ಇಂದಷ್ಟೇ ಬಿಡುಗಡೆ ಆಗಿದೆ.
ಇಂದು (ಮಾರ್ಚ್ 07) ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಸಣ್ಣ ಟೀಸರ್ ಅಷ್ಟೇ ಬಿಡುಗಡೆಯಾಗಿದೆ. ಕೇವಲ 43 ಸೆಕೆಂಡುಗಳ ಟೀಸರ್ ಇದಾಗಿದ್ದರೆ, ಅಷ್ಟರಲ್ಲೇ ಸಿನಿಮಾದಲ್ಲಿ ಪವನ್ ಕಲ್ಯಾಣ್ ಎಷ್ಟು ಪವರ್ ಫುಲ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ತೋರಿಸಲಾಗಿದೆ. ಸಿನಿಮಾದಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದು, ‘ಗಬ್ಬರ್ ಸಿಂಗ್’ ಮಾದರಿಯ ತಮಾಷೆ ಪ್ರವೃತ್ತಿಯ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ಟೀಸರ್ನಲ್ಲಿ ಕೆಲವು ಪಂಚಿಂಗ್ ಡೈಲಾಗ್ಗಳು ಸಹ ಇವೆ. ಜೊತೆಗೆ ಸಣ್ಣ ಆಕ್ಷನ್ ತುಣುಕುಗಳು ಸಹ ಇವೆ.
ಹರೀಶ್ ಶಂಕರ್ ನಿರ್ದೇಶನ ಮಾಡಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ, ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚೆಯೇ ಸಿನಿಮಾ ಶುರು ಮಾಡಿದ್ದರು. ಈ ಸಿನಿಮಾದಲ್ಲಿ ಕನ್ನಡತಿ ಶ್ರೀಲೀಲಾ ನಾಯಕಿ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾಕ್ಕೆ ಬಂಡವಾಳ ಹೂಡಿದೆ. ಸಿನಿಮಾದ ಟೀಸರ್ ನಲ್ಲಿ ಒಂದು ಮಹತ್ವದ ಅಂಶವನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಸಿನಿಮಾದ ಸಂಗೀತ ನಿರ್ದೇಶಕ ಎಂದು ಎಸ್ ತಮನ್ ಹೆಸರನ್ನು ಬಳಸಲಾಗಿದೆ. ಅಸಲಿಗೆ ದೇವಿ ಶ್ರೀ ಪ್ರಸಾದ್ ಅವರು ಈ ಸಿನಿಮಾದ ಸಂಗೀತ ನಿರ್ದೇಶಕರಾಗಿದ್ದರು. ದೇವಿಶ್ರೀ ಪ್ರಸಾದ್ ಅವರು ಹಾಡುಗಳನ್ನು ಮಾಡಿದ್ದಾರೆ, ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ.
ಇದನ್ನೂ ಓದಿ:
ಈ ಮೊದಲು ಮಾರ್ಚ್ 26 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಈಗ ಒಂದು ವಾರ ಮೊದಲೇ ಅಂದರೆ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬದಲಾವಣೆ ಆದ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆಯನ್ನು ಪ್ರೀಪಾನ್ ಮಾಡಲಾಗಿದೆ. ಇದೀಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ರಣ್ವೀರ್ ಸಿಂಗ್ ಅವರ ‘ಧುರಂಧರ 2’ ಸಿನಿಮಾಕ್ಕೆ ಪೈಪೋಟಿ ನೀಡಲಿದೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದೆ, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಮೂರನೇ ಸಿನಿಮಾ ಇದಾಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ