ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’


ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ 'ಧುರಂಧರ 2'

‘ಟಾಕ್ಸಿಕ್’ vs ‘ಧುರಂಧರ 2’ ಎಂಬ ಟಾಕ್ ಜೋರಾಗಿತ್ತು. ಆದರೆ, ಯಶ್ ಅವರು ತಮ್ಮ ಚಿತ್ರವನ್ನು ಮುಂದಕ್ಕೆ ಹಾಕಿಕೊಳ್ಳುವ ಮೂಲಕ ಕ್ಲ್ಯಾಶ್ ತಪ್ಪಿಸಿದರು. ಹೀಗಾಗಿ, ‘ಧುರಂಧರ 2’ ಸೋಲೋ ರಿಲೀಸ್ ಕಾಣಲಿದೆ ಎನ್ನುವಾಗಲೇ ಪವನ್ ಕಲ್ಯಾಣ್ ಅವರ ‘ಉಸ್ತಾದ ಭಗತ್ ಸಿಂಗ್’ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ತೆಲುಗು ಭಾಗದಲ್ಲೇ ‘ಧುರಂಧರ 2’ ಸಿನಿಮಾ ಹೊಡೆತ ಕೊಡೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಧುರಂಧರ 2’ ಚಿತ್ರದ ದೊಡ್ಡ ಬಲ ಎಂದರೆ, ‘ಧುರಂಧರ’ ಚಿತ್ರಕ್ಕೆ ಸಿಕ್ಕ ಪ್ರೀತಿಕ್ರಿಯೆ ಮೊದಲ ಭಾಗ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಆದರೆ, ಸೀಕ್ವೆಲ್ ಹಿಂದಿ ಜೊತೆ ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಇದು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಸಾಕಷ್ಟು ಹೊಡೆತ ಕೊಡೋ ಸಾಧ್ಯತೆ ಇದೆ. ಈ ಸಿನಿಮಾ ರಿಮೇಕ್. ಜೊತೆಗೆ, ಹೆಚ್ಚು ಹೈಪ್ ಇಲ್ಲ. ಇದು ಚಿತ್ರಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

‘ಧುರಂಧರ 2’ ತೆಲುಗು ರಾಜ್ಯಗಳ ಅಡ್ವಾನ್ಸ್ ಬುಕಿಂಗ್‌ನಲ್ಲಿದೆ. ಸದ್ಯ ಪೇಯ್ಡ್ ಶೋಗಳನ್ನು ಮಾರ್ಚ್ 18ಕ್ಕೆ ಹಲವು ಶೋ ಆಯೋಜನೆ ಮಾಡಲಾಗಿತ್ತು, ಅದರಲ್ಲಿಯೂ ಫಿಲ್ಲಿಂಗ್ ಫಾಸ್ಟ್ ಹಂತದಲ್ಲಿದೆ. ಆದರೆ, ‘ಉಸ್ತಾದ್ ಭಗತ್ ಸಿಂಗ್’ ಆ ರೀತಿ ಅಲ್ಲ. ಇದು ತಮಳಿನ ದಳಪತಿ ವಿಜಯ್ ಅವರ ‘ತೇರಿ’ ಚಿತ್ರದ ರಿಮೇಕ್.

ಇದನ್ನೂ ಓದಿ: ‘ಧುರಂಧರ್ 2’ ಟಿಕೆಟ್ ಬೆಲೆ, ಯಾವುದು ಹೆಚ್ಚು? ಎಲ್ಲಿ ಕಡಿಮೆ?

‘ಉಸ್ತಾದ್ ಭಗತ್ ಸಿಂಗ್’ ರಿಮೇಕ್ ಮತ್ತು ಈ ಸಿನಿಮಾ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿದಿದೆ. ಈ ಕಾರಣದಿಂದ ಚಿತ್ರಕ್ಕೆ ತೊಂದರೆ ಆಗುತ್ತಿದೆ. ಜೊತೆಗೆ, ಈ ಮೊದಲು ರಿಲೀಸ್ ಆದ ಪವನ್ ಕಲ್ಯಾಣ್ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಲು ವಿಫಲವಾಗಿದೆ. ಈ ಕಾರಣದಿಂದಲೂ ಚಿತ್ರಕ್ಕೆ ಹೆಚ್ಚಿನ ಹೈಪ್ ಸಿಗುತ್ತಿಲ್ಲ. ಆದರೆ, ‘ಧುರಂಧರ 2’ ಹಾಗಲ್ಲ. ದಕ್ಷಿಣದಲ್ಲೂ ಈ ಸಿನಿಮಾ ಪಾರುಪತ್ಯ ಸಾಧಿಸಿದೆ. ‘ಧುರಂಧರ 2’ ಚಿತ್ರದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರಕ್ಕೆ, ರಣವೀರ್ ಸಿಂಗ್ ನಾಯಕ. ಆದಿತ್ಯ ಧಾರ್ ಅವರ ನಿರ್ದೇಶನ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *