ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ವಿಶೇಷ ತಂಡ ಪತ್ತೆ ಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (ತೂಕದ ಸೇತುವೆ) ಬಳಿ ಅಕ್ರಮವಾಗಿ ಲಾಟರಿ ಮಾರಾಟವನ್ನು ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ ಲಾಟರಿ ಮಾರಾಟದ ವೇಳೆ ಬಂಧಿಸಲಾಗಿದೆ.
ಬಂಧಿತರಿಂದ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಲಾಗಿದೆ. ಇದರಲ್ಲಿ ಒಟ್ಟು 55,200 ರೂ. ಮೌಲ್ಯದ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಗಳಿಂದ ಅರುಣ್ ಕುಮಾರ್ ನಿಂದ 33,000 ರೂ. ಮತ್ತು ಸ್ವಾಮಿಯಿಂದ 22,200 ರೂ. ಮೌಲ್ಯದ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ಇನ್ನು ಆರೋಪಿಗಳಿಂದ ಒಟ್ಟು 22,930 ರೂ. ನಗದು ಹಣವನ್ನು ಪಡೆಯಲಾಗಿದೆ. ಅದರಲ್ಲಿ ಅರುಣ್ ಕುಮಾರ್ ನಿಂದ 20,000 ರೂ. ಹಾಗೂ ಸ್ವಾಮಿಯಿಂದ 2,930 ರೂ. ಹಣವನ್ನು ಸಂಗ್ರಹಿಸಲಾಗಿದೆ.
ಇದನ್ನೂ ಓದಿ: ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರು ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಮತ್ತು ಅಡಿಷನಲ್ ಎಸ್‌ಪಿ ಮಲ್ಲಿಕ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ತಂಡದಲ್ಲಿ ಇನ್ಸ್‌ಪೆಕ್ಟರ್ ಗೋವಿಂದರಾಜು ಮತ್ತು ಪಿಎಸ್‌ಐ ಜಗದೀಶ್ ಹಾಗೂ ಎಸ್‌ಪಿ ಸ್ಕ್ವ್ಯಾಡ್ ಸಿಬ್ಬಂದಿ ಇದ್ದರು. ಕರ್ನಾಟಕದಲ್ಲಿ ಲಾಟರಿ ಮಾರಾಟವನ್ನು ನಿಷೇಧಿಸಲಾಗಿದ್ದರೂ, ಗಡಿ ಭಾಗದ ಮೂಲಕ ಕೇರಳ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ