Headlines

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್


ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ನಮ್ಮನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಿಗೆ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (ಇರಾನ್ ಕ್ಷಮೆ ಕ್ಷಿಪಣಿ ಹಾನಿ)

ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು ಇರಾನ್‌ನ ಮಧ್ಯಂತರ ನಾಯಕತ್ವ ಮಂಡಳಿ ನಿರ್ಧರಿಸಿದೆ. ಆದರೆ, ಆ ದೇಶಗಳ ನೆಲದಿಂದ ಇರಾನ್ ಮೇಲೆ ದಾಳಿ ನಡೆದರೆ ಮಾತ್ರ ತಿರುಗೇಟು ನೀಡುವುದಾಗಿ ಪೆಜೇಶ್ಕಿಯಾನ್ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕ-ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಮತ್ತು ಅವರ ಕುಟುಂಬಸ್ಥರು ಹತರಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳು ದುಬೈ, ಅಬುಧಾಬಿ, ಕತಾರ್ ಮತ್ತು ಬಹ್ರೇನ್‌ನಂತಹ ಗಲ್ಫ್ ರಾಷ್ಟ್ರಗಳಿಗೆ ತಗುಲಿತ್ತು. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದಾಳಿಯಲ್ಲಿ ನಾಲ್ವರು ಬಳಲಿದ್ದರು. ಜೊತೆಗೆ ಬುರ್ಜ್ ಅಲ್ ಅರಬ್ ಹೋಟೆಲ್ ಮತ್ತು ಸೌದಿ ಅರಾಮ್ಕೊ ತೈಲ ಸಂಸ್ಕರಣಾ ಕೇಂದ್ರಗಳ ಮೇಲೆಯೂ ಇರಾನ್ ದಾಳಿ ನಡೆಸಿದೆ ಎಂಬ ವರದಿಗಳಿವೆ.

ಇದನ್ನೂ ಓದಿ: ಇರಾನ್ ಜತೆಗೂಡಿ ಟ್ರಂಪ್, ಅಮೆರಿಕದ ಅಧಿಕಾರಿಗಳಿಗೆ ಸಂಚು ರೂಪಿಸಿತ್ತಾ ಪಾಕ್? ಮಹತ್ವದ ಮಾಹಿತಿ ಬಯಲು

ಸೌದಿ ಅರೇಬಿಯಾದ ರಕ್ಷಣಾ ಸಚಿವ ಪ್ರಿನ್ಸ್ ಖಾಲಿದ್ ಬಿನ್ ಸಲ್ಮಾನ್ ಅವರು “ತಪ್ಪು ಲೆಕ್ಕಾಚಾರ ಬೇಡ” ಎಂದು ಇರಾನ್‌ಗೆ ಎಚ್ಚರಿಕೆ ನೀಡಿದ್ದು, ಸೌದಿ ಅರೇಬಿಯಾದ ತೈಲ ಕ್ಷೇತ್ರಗಳ ರಕ್ಷಣೆಗೆ ತಾವು ಬದ್ಧರಾಗಿದ್ದಾರೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *