Headlines

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್


ಬೆಂಗಳೂರು, ಮಾರ್ಚ್ 03): ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ (ಜೆಡಿಎಸ್ ಮತ್ತು ಬಿಜೆಪಿ) ಸಂಪರ್ಕ ಅಧಿಕಾರ ಹಂಚಿಕೆ ಬಿಕ್ಕಟ್ಟು ಕಾಂಗ್ರೆಸ್ ನೊಳಗಿನ ಕಿಚ್ಚಿಗೆ ಫೋನ್ ಕದ್ದಾಲಿಕೆ (ಫೋನ್ ಟ್ಯಾಪಿಂಗ್) ಎನ್ನುವ ತುಪ್ಪ ಸುರಿದಿದ್ದು, ಇದು ತೀವ್ರ ಸ್ವರೂಪವಾಗಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಆಯಂಡ್ ಟೀಮ್ನ ಮೇಲೆ ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸಿದ್ದರಾಮಯ್ಯ ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯೂಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ ನಾನೇ ಎಂದು ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರು, ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದಾರೆ ಎಂದು ಭಾವಿಸಿದ್ದೇನೆ. ಕೆಲಸ ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯೂಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ.. ನಾನೇ.. ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ. ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳೇ ಮಾತನಾಡುತ್ತಿವೆ. ಆ ಬಗ್ಗೆ ನಾನು ಹೇಳಿದ್ದೇನೆ ಅಷ್ಟೇ. ನಿಮ್ಮ ಪುಂಖಾನುಪುಂಖ ಪುರಾಣ ನೋಡಿದರೆ ನಿಮಗೆ ಆಡಳಿತಕ್ಕಿಂತ ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಮುತುವರ್ಜಿ, ಆಸಕ್ತಿ ಇದ್ದಂತಿದೆ. ಪ್ರತಿಪಕ್ಷಗಳು ತಮ್ಮ ಕೆಲಸ ಮಾಡುತ್ತಿವೆ. ಜನರ ದಯೆ ತೋರಿ ನಿಮಗೆ 140 ಸೀಟು ಕೊಟ್ಟರೆ ಆಡಳಿತ ನಡೆಸುವುದು ಬಿಟ್ಟು ಅಡ್ನಾಡಿಗಳಂತೆ ಹಾದಿಬೀದಿಯಲ್ಲಿ ಕಚ್ಚಾಡುತ್ತಿದೆ. ನಿಮ್ಮ ಪಕ್ಷದ ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ ಎಂಬ ಅನುಮಾನ ಪ್ರತಿಪಕ್ಷಗಳದ್ದು ಮತ್ತು ಮಾಧ್ಯಮಗಳದ್ದು. ಪ್ರಶ್ನಿಸುವ ಜಾಗದಲ್ಲಿ ಪ್ರತಿಪಕ್ಷಗಳಿವೆ, ಉತ್ತರಿಸಿ. ವಿಷಯಾಂತರ ಬಿಟ್ಟು ಸತ್ಯ ಹೇಳಿ. ಸತ್ಯ ನಿಮ್ಮನೆ ದೇವರು ಅಲ್ಲವೇ? ಸತ್ಯಮೇವ ಜಯತೇ ನಿಮ್ಮ ಸಿದ್ದಸ್ಲೋಗನ್! ಕಥೆ ಕಟ್ಟಿ ಕಾಲಹರಣ ಮಾಡುತ್ತಿರೇಕೆ? ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ ಆಗಿದ್ದೆ.ಸ್ವತಂತ್ರ ಸರ್ಕಾರವೂ ನನ್ನದಲ್ಲ. ಕದ್ದಾಲಿಸುವ ಕರ್ಮ ನನಗೇಕೆ? ನಿಮ್ಮಂತೆ ಸಿದ್ದವನದಲ್ಲಿ ಕೂತು ಮನೆಹಾಳು ಮಾಡೋದಕ್ಕೆ ಶಾಸಕರಿಗೆ ಬ್ರೈನ್ ವಾಶ್ ಮಾಡುವ ಹೀನ ಜಾಯಮಾನ ನನ್ನದಲ್ಲ. ನಿಮ್ಮ ಮೊದಲ ಐದು ವರ್ಷದ ಸರಕಾರವೂ.. ಈಗಿನ ನಿಮ್ಮ ಗುಪ್ತಚರವೂ ರಾಜಕಾರಣವನ್ನು ನಾನು ಕಂಡಿರುವುದೇ ಅಲ್ಲವೇ? ಎಂದು ತಿವಿದಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಫೋನ್ ಟ್ಯಾಪಿಂಗ್ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್

ಗುರುವಿಗೆ ಗುನ್ನ ಇಟ್ಟಿರಿ

ನನ್ನ ಜತೆ ನೇರ ಸಂಘರ್ಷಕ್ಕೆ ಬಂದಾಗಲೆಲ್ಲಾ ನೀವು ದೇವೇಗೌಡರನ್ನು ಎಳೆದು ತರುತ್ತೀರಿ. ದೇವೇಗೌಡರು ನಿಮ್ಮ ರಾಜಕೀಯ ಗುರು, ನಿಮ್ಮನ್ನು ಗುರುತಿಸಿ ಬೆಳೆಸಿದವರು. ಅದಕ್ಕಾಗಿ ಎಷ್ಟೋ ನಾಯಕರ ವಿರೋಧ ಕಟ್ಟಿಕೊಂಡರು. ಅದೂ ನಿಮಗೂ ಗೊತ್ತಿದೆ. ಆದರೆ, ಸಮಯಕ್ಕೆ ಕಾಯುತ್ತಿದ್ದ ನೀವು ಗುರುವಿಗೆ ಗುನ್ನ ಇಟ್ಟಿರಿ. ಅಷ್ಟರ ಮಟ್ಟಿಗೆ ನಿಮ್ಮ ಕಪಟತನ, ಕುಟಿಲತೆಯನ್ನು ಸ್ವಯಂ ಸ್ಮರಣೆ ಮಾಡುತ್ತಿರುವಿರಿ, ಸಂತೋಷ. ದೆಹಲಿಯಲ್ಲಿ ದೇವೇಗೌಡರು ಅಧಿಕಾರ ಕಳೆದುಕೊಂಡಾಗ ನೀವು ಯಾವ ಪಕ್ಷದಲ್ಲಿದ್ದಿರಿ ಎನ್ನುವುದನ್ನು ಅರೆಕ್ಷಣ ನೆನಪು ಮಾಡಿಕೊಳ್ಳಿ. ನಿಮಗೂ ಆತ್ಮಸಾಕ್ಷಿ ಇರಬೇಕಲ್ಲಾ? ಆಗ ನಿಮ್ಮ ನಾಲಿಗೆಯಿಂದ ಉದುರಿದ್ದ ಸರಣಿ ನುಡಿಮುತ್ತುಗಳನ್ನು ಒಮ್ಮೆ ಪುನಸ್ಮರಣೆ ಮಾಡಿಕೊಳ್ಳಿ? ಅವತ್ತು ಅದೇ ಸೀತಾರಾಂ ಕೇಸರಿ ಬಗ್ಗೆ ತಾವು ಏನೇನು ಹೇಳಿದಿರಿ? ಆ ನಂತರದ ಕಾಲದಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಅದೆಷ್ಟು ವಾಚಾಮಗೋಚರ ನಿಂದಿಸಿದ್ದರು ಎಂದು ಜ್ಞಾಪಕ ಮಾಡಿಕೊಳ್ಳಿ ಅಂದಿನ ಘಟನೆಯನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.

ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ

ದೇವೇಗೌಡರು ಅಧಿಕಾರವನ್ನು ವಿರೋಚಿತವಾಗಿ ತ್ಯಜಿಸಿದರು. ರಾಜೀನಾಮೆ ಘೋಷಿಸಿದ ಮರುಕ್ಷಣದಲ್ಲೇ ಸಂಸತ್ತಿನಲ್ಲಿಯೇ ವಾಜಪೇಯಿ ಅವರಿಗೆ ಮುಕ್ತ ಬೆಂಬಲ ಕೊಡುತ್ತೇವೆ ಎಂದರೂ ಆ ಅಧಿಕಾರ ಬೇಡವೆಂದು ವಿನಯದಿಂದ ಧಿಕ್ಕರಿಸಿದರು. ಅವರ ಗರಡಿಯಲ್ಲಿ ಪಳಗಿ, ಬೆಳಗುತ್ತಿರುವ ನೀವೂ ಅಂಥ ಕೆಚ್ಚನ್ನು, ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ. ನಿಮ್ಮ ಕುಚುಕು ಗೆಳೆಯನ ಮೇಲೆ ಪ್ರೀತಿ ತೋರಿಸಿ. ಗುಂಡಿಗೆ ಸಾಲುತ್ತಿಲ್ಲವೇ ಮಿಸ್ಟರ್ ಸಿದ್ದರಾಮಯ್ಯನವರೇ, ಸೋತರೆ ಸೋಲಬೇಕು ಬಾಹುಬಲಿಯಂತೆ! ನಾನು ಸೋತಿದ್ದೇನೆ, ಓಡಿ ಹೋಗಿಲ್ಲ. ನಾನು ರಣಹೇಡಿಯಂತೆ ಪಲಾಯನ ಚಿತ್ರ, ನೆನಪಿರಲಿ ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 10:09 pm, ಮಂಗಳವಾರ, 3 ಮಾರ್ಚ್ 26





Source link

Leave a Reply

Your email address will not be published. Required fields are marked *