SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​


SSLC ತೃತೀಯ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ಪ್ರಶ್ನಿಸಿ PIL: ಅರ್ಜಿದಾರರಿಗೆ ದೊಡ್ಡ ಶಾಕ್ ಕೊಟ್ಟ ಅರ್ಜಿ

ಬೆಂಗಳೂರು, ಏಪ್ರಿಲ್ 10: ಎಸ್ ಎಸ್ ಎಲ್ ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಯಿತು. ಆದರೆ ಅರ್ಜಿದಾರರಿಗೆ ಈಗ ಬಿಗ್ ಶಾಕ್ ಆಗಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ!

ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರವಾದ ಕೇವಲ ಪತ್ರಿಕೆ ವರದಿ ಆಧಾರದ ಮೇಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್, ಪಿಐಎಲ್ ವಜಾಗೊಳಿಸಲಾಗಿದೆ. ಆ ಮೂಲಕ ಅರ್ಜಿದಾರರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: SSLC ತೃತೀಯ ಭಾಷೆಗೆ ಗ್ರೇಡ್ ವಿವಾದ; ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ

ಎಸ್‌ಎಸ್‌ಎಲ್‌ಸಿ ತೃತೀಯ ವಿದ್ಯಾರ್ಥಿಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್ ಅವರಿಗೆ ಪತ್ರ ಬರೆದಿದ್ದರು. ಗವರ್ನರ್ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆ ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂದು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *