Headlines

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ


ನವದೆಹಲಿ, ಡಿಸೆಂಬರ್ 4: ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (ಭಾರತದಲ್ಲಿ ಪುಟಿನ್) ದೆಹಲಿಗೆ ಆಗಮಿಸಿದ್ದಾರೆ. 4 ವರ್ಷಗಳ ಬಳಿಕ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ, ಅಮೆರಿಕದ ಜೊತೆಗಿನ ಭಾರತದ ಸಂಬಂಧ ಹಳಸಿರುವ ಈ ಭೇಟಿ ಜಾಗತಿಕವಾಗಿಯೂ ಬಹಳ ಮಹತ್ವ ಪಡೆದಿದೆ. ಇಂದು ಖುದ್ದಾಗಿ ದೆಹಲಿಯ ವಿಮಾನ ನಿಲ್ದಾಣಕ್ಕೆ ತೆರಳಿ ಪುಟಿನ್ ಪ್ರಧಾನಿ ಮೋದಿ ಬರಮಾಡಿಕೊಂಡಿದ್ದಾರೆ. ಇದಾದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ಪ್ರಧಾನಮಂತ್ರಿಗಳ ಸರ್ಕಾರಿ ನಿವಾಸಕ್ಕೆ ತೆರಳಿದ್ದಾರೆ. ಪುಟಿನ್ ಅವರ ಸ್ವಾಗತಕ್ಕಾಗಿ ಪ್ರಧಾನಿಯ ಅಧಿಕೃತ ನಿವಾಸವನ್ನು ಬಹಳ ಸುಂದರವಾಗಿ ಅಲಂಕರಿಸಲಾಗಿದೆ. ಇಂದು ಇಲ್ಲಿ ಪ್ರಧಾನಿ ಮೋದಿ ತಮ್ಮ ಗೆಳೆಯ ಪುಟಿನ್ ಗಾಗಿ ವಿಶೇಷ ಭೋಜನಕೂಟವನ್ನು ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *