
ನವದೆಹಲಿ, (ಮಾರ್ಚ್ 22): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಯುದ್ಧ ಸದೃಶ್ಯ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22) ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತೈಲ, ಇಂಧನ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ದೇಶದಲ್ಲಿ ವಿದ್ಯುತ್ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ವಿದ್ಯುತ್ ಸ್ಥಾವರಗಳಲ್ಲಿ ಪೂರೈಕೆಗೆ ಅಗತ್ಯವಿರುವಷ್ಟು ಕಲ್ಲಿದ್ದಲು ದಾಸ್ತಾನು ಇರುವುದನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಸರ್ವ ಸನ್ನದ್ಧವಾಗಿದೆ. ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ವಿವಿಧ ಕೈಗಾರಿಕಾ ವಲಯಗಳಿಗೆ ಕಚ್ಚಾ ವಸ್ತುಗಳ ಆಮದನ್ನು ಕೇವಲ ಒಂದು ಪ್ರದೇಶಕ್ಕೆ ಸೀಮಿತಗೊಳಿಸಲಾಗಿದೆ, ಪರ್ಯಾಯ ದೇಶಗಳಿಂದ ಆಮದು ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಅದೇ ಭಾರತೀಯ ಉತ್ಪನ್ನಗಳ ರಫ್ತಿಗೆ ಹೊಸ ಮಾರುಕಟ್ಟೆಗಳಲ್ಲಿ ಪ್ರಧಾನಿ ಮೋದಿ ಸೂಚನೆ.
ಯುದ್ಧದ ನೆಪದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಕಾಳಸಂತೆ ನಡೆಯದಂತೆ ರಾಜ್ಯ ಸರ್ಕಾರಕ್ಕೆ ಸಮನ್ವಯ ಸಾಧಿಸಲು ಪ್ರಧಾನಿ ತಿಳಿಸಿದ್ದು, ಅಕ್ರಮ ದಾಸ್ತಾನು ಮಾಡಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ‘ಹೋಲ್ ಆಫ್ ಗವರ್ನಮೆಂಟ್’ ಮಾದರಿಯಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಿದೆ.