ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ನವದೆಹಲಿ: 2025ರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಬದ್ದ ಎದುರಾಳಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ, ನೆರೆಯ ಪಾಕಿಸ್ತಾನವನ್ನು ಕಾಲೆಳೆದಿದ್ದಾರೆ. ಈ ಮೂಲಕ ಸೋತ ಪಾಕ್ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ.

2025ರ ಏಷ್ಯಾಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ತಿಲಕ್ ವರ್ಮಾ ಆಕರ್ಷಕ ಬ್ಯಾಟಿಂಗ್ ಹಾಗೂ ಕುಲ್ದೀಪ್ ಯಾದವ್ ಮಿಂಚಿನ ದಾಳಿಯ ನೆರವಿನಿಂದ ಟೀಂ ಇಂಡಿಯಾ 5 ವಿಕೆಟ್ ಅಂತರದ ಜಯ ಸಾಧಿಸುವ ಮೂಲಕ ಏಷ್ಯಾಕಪ್ ಟ್ರೋಫಿ ಗೆದ್ದು ಬೀಗಿದೆ.

ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನ ಎದುರು ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ತಮಗೆ ಪಾಕ್ ಯಾವ ವಲಯದಲ್ಲೂ ಸರಿಸಾಟಿಯಲ್ಲ ಎನ್ನುವ ಸ್ಪಷ್ಟ ಸಂದೇಶ ರವನಿಸಿದೆ.

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಇದರ ಜತೆಗೆ ಪಾಕ್‌ನ ಕಾಲೆಳೆದಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂದೂರ. ಫಲಿತಾಂಶ ಒಂದೇ – ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು’ ಎಂದಿದ್ದಾರೆ.

ಪಾಕ್ ಪ್ರೇರಿತ ಉಗ್ರರು ನಡೆಸಿದ ಪೆಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಕಳೆದ ಮೇ 6-7ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೇರೂರಿದ್ದ 9 ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಚರಣೆ ಮಾಡಿ, ಉಗ್ರನೆಲೆಗಳನ್ನು ಧ್ವಂಸಗೊಳಿಸಿತ್ತು.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾರತದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Source link

Leave a Reply

Your email address will not be published. Required fields are marked *